Breaking News

7.50 ಟನ್ ತೂಕದ ವಾಹನಗಳ ಸಂಚಾರಕ್ಕೆ ಅವಕಾಶ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು

Spread the love

ಬೆಂಗಳೂರು: ನಗರದಲ್ಲಿ 7.50 ಟನ್ ತೂಕದವರೆಗಿನ ವಾಹನಗಳ ಸಂಚಾರಕ್ಕೆ ಅವಕಾಶ ಸಿಕ್ಕಿದ್ದು, ಲಾರಿ ಮಾಲೀಕರು ಹಾಗೂ ಏಜೆಂಟರು ತಾವು ಕರೆ ನೀಡಿದ್ದ ಮುಷ್ಕರವನ್ನು ಕೈ ಬಿಟ್ಟಿದ್ದಾರೆ.

ನಗರದಲ್ಲಿ ನಿತ್ಯವೂ ಬೆಳಿಗ್ಗೆ 8ರಿಂದ 11 ಗಂಟೆವರೆಗೆ ಹಾಗೂ ಸಂಜೆ 4ರಿಂದ 8 ಗಂಟೆವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು.

ಇದನ್ನು ಖಂಡಿಸಿದ್ದ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘ, ಮಾರ್ಚ್ 16ರಂದು ತಡರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿತ್ತು.

ರಾಜ್ಯ ಸರ್ಕಾರದ ಸೂಚನೆಯಂತೆ ಲಾರಿ ಮಾಲೀಕರು, ಏಜೆಂಟರ ಜೊತೆ ಬೆಂಗಳೂರು ವಿಶೆಷ ಕಮಿಷನರ್ (ಸಂಚಾರ) ಎಂ.ಎ. ಸಲೀಂ ಗುರುವಾರ ಸಭೆ ನಡೆಸಿದರು.

‘ನಗರದಲ್ಲಿ ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ನಿಯಮದಲ್ಲಿ ಬದಲಾವಣೆ ಮಾಡಿ, 7.50 ಟನ್ ತೂಕದವರೆಗಿನ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ಸಲೀಂ ಭರವಸೆ ನೀಡಿದರು.
ಇದಕ್ಕೆ ಒಪ್ಪಿದ ಲಾರಿ ಮಾಲೀಕರು ಹಾಗೂ ಏಜೆಂಟರು, ಮುಷ್ಕರ ಹಿಂಪಡೆದಿರುವುದಾಗಿ ಘೋಷಿಸಿದರು. ಸಭೆಯಲ್ಲಿ ಸಂಘದ ಅಧ್ಯಕ್ಷ ಷಣ್ಮುಖಪ್ಪ, ಕಾರ್ಯದರ್ಶಿ ಕೆ.ಎನ್. ಅಶ್ವತ್ಥ್, ಜಂಟಿ ಕಾರ್ಯದರ್ಶಿ ಮಧು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಬಾನು ಮುಷ್ತಾಕ್ ಆಯ್ಕೆಯನ್ನು ಧರ್ಮಾಂದರು ಮಾತ್ರ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ

Spread the loveಮೈಸೂರು: “ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆ ವಿಚಾರದಲ್ಲಿ ಬಿಜೆಪಿ ನಾಯಕರು ಕುಂಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ