ಬೆಳಗಾವಿ: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಂಬಂಧ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆಯಿತು.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖ ನಾಯಕರು, ಶಾಸಕರು ಮಾಜಿ ಶಾಸಕರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಧಾರವಾಡ ಗದಗ ಹಾವೇರಿ ಸೇರಿದಂತೆ 10 ಜಿಲ್ಲೆಗಳ ಪ್ರಮುಖ ಮುಖಂಡರು ಮತ್ತು ಟಿಕೆಟ್ ಆಕಾಂಕ್ಷೆಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಇದಲ್ಲದೆ ಸಭೆಯಲ್ಲಿ ಇದೇ ದಿನಾಂಕ 20 ರಂದು ಬೆಳಗಾವಿಗೆ ಭೇಟಿ ನೀಡಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಸುವ ಬಗ್ಗೆ ಸಹ ಚರ್ಚೆ ನಡೆಸಲಾಯಿತು.
Laxmi News 24×7