Breaking News

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Spread the love

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಡಾ.ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಭಾನುವಾರ ರಾತ್ರಿ 8:45ರ ವೇಳೆಗೆ ಮನಮೋಹನ್ ಸಿಂಗ್ ಅವರಿಗೆ ಎದೆನೋವು ಕಾಣಸಿಕೊಂಡಿದೆ. ಆ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಏಮ್ಸ್​ ಆಸ್ಪತ್ರೆಯ ಡಾ ನಿತೀಶ್ ನಾಯ್ಕ್ ನೇತೃತ್ವದ ವೈದ್ಯರ ತಂಡ ಸಿಂಗ್ ಅವರಿಗೆ ಚಿಕಿತ್ಸೆ ನೀಡಿತ್ತು. ಇದೀಗ ಅವರ ಆರೋಗ್ಯ ಸಂಪೂರ್ಣ ಗುಣವಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರಿಗೆ ಕೊರೋನಾ ಪರೀಕ್ಷೆ ಕೂಡ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ