Breaking News

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡ ಸೈಲೆಂಟ್​ ಸುನೀಲ.

Spread the love

ಬೆಂಗಳೂರು: ಬಿಜೆಪಿಗೆ ಸೈಲೆಂಟ್​ ಸುನೀಲ ಸೇರುತ್ತಾರಾ ಇಲ್ಲವಾ ಎನ್ನುವ ಪ್ರಶ್ನೆ ಹಲವು ದಿನಗಳಿಂದ ಕಾಡುತ್ತಿತ್ತು. ಇದೀಗ ಬಿಜೆಪಿಗೆ ಸೈಲೆಂಟ್​ ಸುನೀಲ ಅಧಿಕೃತವಾಗಿ ಸೇರ್ಪಡೆಯಾಗಿದ್ದು ಹಲವು ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ.

ಈ ಹಿಂದೆ ಸೈಲೆಂಟ್ ಸುನೀಲ ರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ ಎಂದು ಬಿಜೆಪಿ ಹೇಳಿತ್ತು. ಆದರೆ ಈಗ ಬಿಜೆಪಿಗೆ ಸೇರಿಸಿಕೊಳ್ಳುವ ಮೂಲಕ ಪ್ರತಿಪಕ್ಷಗಳಿಗೆ ಆಹಾರವಾಗಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಕಾಂಗ್ರೆಸ್ ಪಕ್ಷ, ಬಿಜೆಪಿಯನ್ನು ರೌಡಿ ಮೋರ್ಚಾ ಎಂದಿತ್ತು. ಸೈಲೆಂಟ್ ಸುನೀಲ ಪಕ್ಷ ಸೇರುವ ವಿಚಾರವಾಗಿ ಸಾರ್ವಜನಿಕವಾಗಿಯೂ ಬಿಜೆಪಿ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು.

ಇದರಿಂದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೈಲೆಂಟ್ ಸುನಿಲ್​ರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಇದೀಗ ಸೈಲೆಂಟ್​ ಸುನೀಲ ಈಗ ಬಿಜೆಪಿಗೆ ಸೇರಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ