Breaking News

ಫಕೀರನ ವೇಷದಲ್ಲಿ ಬಂದು ಮನೆಗೆ ಕನ್ನ ಹಾಕುತ್ತಿದ್ದ ಖದೀಮರು ಅಂದರ್; !

Spread the love

ಹೊಸಕೋಟೆ: ಹೊಸಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಖತರ್ನಾಕ್​ಕಳ್ಳರು ಫಕೀರರ ವೇಷ ಹಾಗೂ ಪಾಲಿಶ್ ಮಾಡುವ ನೆಪದಲ್ಲಿ ಮನೆಗಳಿಗೆ ಬಂದು ಕನ್ನ ಹಾಕುತ್ತಿದ್ದವನ್ನು ಬಂಧಿಸಿದ್ದಾರೆ.

ಈ ಮೂರು ಜನ ಅಂತರ್​​ರಾಜ್ಯ ಕುಖ್ಯಾತ ಕಳ್ಳರನ್ನು ಪೊಲೀಸರು ಬಂದಿಸಿದ್ದಾರೆ.

ಬಂಧಿತರಿಂದ ಒಟ್ಟು 32 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ.

ಬಂಧಿತರನ್ನು ಆರೋಪಿಗಳನ್ನು ಸೈಯದ್ ಆಲಿ, ಭರತ್ ಕುಮಾರ್, ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಈ ಖದೀಮರು ಫಕೀರನ ವೇಶ ಹಾಕಿಕೊಂಡು ಮತ್ತು ಚಿನ್ನಾಭರಣಗಳನ್ನ ಪಾಲಿಶ್ ಮಾಡುವ ನೆಪದಲ್ಲಿ ಬರುತ್ತಿದ್ದರು. ಈ ವೇಳೆ ಮಹಿಳೆಯರ ಗಮನ ಬೆರೆಡೆ ಸೆಳೆದು ಚಿನ್ನಾಭರಣ ದೋಚಿ ಎಸ್ಕೇಪ್‌ ಆರೋಪಿಗಳು ಆಗುತ್ತಿದ್ದರು.

ಇವರು ಬೆಂಗಳೂರು, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಕಳ್ಳತನ ಕೃತ್ಯಗಳನ್ನು ಮಾಡುತ್ತಿದ್ದರು. ಇದಿಷ್ಟೇ ಅಲ್ಲದೇ ವಯೋವೃದ್ದರನ್ನು ಯಾಮಾರಿಸಿ ಚಿನ್ನಾಭರಣ ದೋಚುತ್ತಿದ್ದರು ಎನ್ನಲಾಗಿದೆ. ಹೊಸಕೋಟೆ ನಗರದಲ್ಲೂ ಇದೇ ರೀತಿ ಮಾಡಿ ಈ ಮೂವರು ಎಸ್ಕೇಪ್ ಆಗಿದ್ದರು. ಹೀಗಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ‌ ನಡೆಸಿ ಇವರನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ