Breaking News

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ.

Spread the love

ಬೆಳಗಾವಿ: ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸುವ ಪಣ ತೊಟ್ಟು, ನಾವು ಇದೇ ಭೂಮಿಯಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿದ್ದೆವು. ಇಂದು ಇದೇ ಭೂಮಿಯಲ್ಲಿ ಈ ಯುವಕ್ರಾಂತಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.

ಬೆಳಗಾವಿಯ ಯುವಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಈ ಪಕ್ಷ ರೈತರು, ಕಾರ್ಮಿಕರು, ಯುವಕರು, ಮಹಿಳೆಯರ ನಂಬಿಕೆಯನ್ನು ಪಡೆದಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡಬೇಕಿದೆ. ಇಲ್ಲಿ ಸೇರಿರುವ ಜನರಿಗೆ ನಾಲ್ಕು ಪಟ್ಟು ಜನ ಹೊರಗೆ ಸೇರಿದ್ದಾರೆ. ಇಷ್ಟು ಪ್ರೀತಿ ತೋರಿರುವ ನಿಮಗೆ ಧನ್ಯವಾದಗಳು ಎಂದರು.

ರಾಜೀವ್ ಗಾಂಧಿ ಅವರು ಯುವಕರ ಮೇಲೆ ವಿಶೇಷ ಪ್ರಿತಿ ಹೊಂದಿದ್ದರು. ಅದಕ್ಕಾಗಿ ಮತದಾನದ ಹಕ್ಕನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಿದರು. ಭಾರತ ಪುರಾತನ ದೇಶವಾದರೂ ಯುವಕರ ದೇಶ ಎಂದು ರಾಜೀವ್ ಗಾಂಧಿ ಅವರು ಹೇಳಿದ್ದಾರೆ.

ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು, ಉದ್ಯೋಗ ನೀಡಬೇಕು. ಯುವಕರು ಉದ್ಯೋಗ ಪಡೆಯುವುದಷ್ಟೇ ಅಲ್ಲ, ಅವರರೇ ಉದ್ಯೋಗ ಸೃಷ್ಟಿಸುವಂತೆ ಮಾಡಬೇಕು. ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಮೀಸಲಾತಿ ನೀಡಲು ಕಾರ್ಯಕ್ರಮ ಮಾಡುತ್ತಿದ್ದೇವೆ.

ಖಾಸಗಿ ಉದ್ಯೋಗ ವಿನಿಮಯ ಕಾರ್ಯಕ್ರಮ, ಸರ್ಕಾರಿ ಖಾಲಿ ಹುದ್ದೆ ಭರ್ತಿ ಮಾಡಲಾಗುವುದು. ಈ ನೇಮಕಾತಿಗಳನ್ನು ಭ್ರಷ್ಟಾಚಾರ ಮುಕ್ತವಾಗಿ ಮಾಡಲಿದೆ. ರಾಜ್ಯದಲ್ಲಿ ಪಾರದರ್ಶಕ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲಾಗುವುದು.

ಕಾಂಗ್ರೆಸ್ ಪಕ್ಷದ ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿ ಯೋಜನೆಯನ್ನು ಇದೇ ಭೂಮಿಯಲ್ಲಿ ಘೋಷಿಸಲಾಗಿತ್ತುಈ ಯೋಜನೆ ಮೂಲಕ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಇದರಿಂದ ಪ್ರತಿ ತಿಂಗಳು 1500 ರೂ.ನಂತೆ ವರ್ಷಕ್ಕೆ 18 ಸಾವಿರ ಉಳಿತಾಯವಾಗಲಿದೆ. ಇನ್ನು ಎರಡನೇ ಗ್ಯಾರಂಟಿ ಯೋಜನೆಯಾಗಿ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂ ಪ್ರೋತ್ಸಾಹ ಧನ ನೀಡಲಾಗುವುದು. ಆಮೂಲಕ ವರ್ಷಕ್ಕೆ 24 ಸಾವಿರ ನೀಡಲಾಗುವುದು. ಈ ಎರಡು ಯೋಜನೆಗಳಿಂದ ವರ್ಷಕ್ಕೆ 42 ಸಾವಿರದಂತೆ ಐದು ವರ್ಷಕ್ಕೆ 2.10 ಲಕ್ಷ ಹಣ ಉಳಿತಾಯವಾಗಲಿದೆ. ಇನ್ನು ಮೂರನೇ ಗ್ಯಾರೆಂಟಿ ಯೋಜನೆಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಈ ಎಲ್ಲ ಯೋಜನೆಗಳನ್ನು ನೀವು ಪ್ರತಿ ಮನೆ ಮನೆಗೆ ತಲುಪಿಸಬೇಕು ಎಂದು ಕರೆ ನೀಡಿದರು.

ಈ ಬಾರಿ ನಾವು ಒಟ್ಟಾಗಿ ಕೆಲಸ ಮಾಡಿ ರಾಜ್ಯದಲ್ಲಿ ಪಕ್ಷಕ್ಕೆ 140 ಕ್ಷೇತ್ರ ತಂದುಕೊಟ್ಟು ರಾಜ್ಯದಲ್ಲಿ ಆಡಳಿತ ನಡೆಸುತ್ತೇವೆ ಎಂದು ನಾನು ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸಂದರ್ಭದಲ್ಲಿ ಮಾತು ನೀಡುತ್ತಿದ್ದೇನೆ.

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಈ ಕೈ ಜೊತೆ ಕೈ ಜೋಡಿಸಿ ಎಂದು ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದರು


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ