Breaking News
Home / ರಾಜಕೀಯ / ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ

ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ

Spread the love

ಚಿತ್ರದುರ್ಗ: ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರೆ ಎಳೆದಿದ್ದಾರೆ.

ಹಿರಿಯೂರಿನಲ್ಲಿ ಸೋಮವಾರ ಬಿಜೆಪಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, ನಮ್ಮ ಜೊತೆಯಲ್ಲೇ ಇದ್ದಾರಲ್ಲಾ ಎಂದು ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು ಹೇಳಿದರು.

 

ಈ ವೇಳೆ ಪೂರ್ಣಿಮಾ ಟಿವಿಯವರಿಗೆ ಬುದ್ದಿ ಇಲ್ಲ. ಪದೇ ಪದೇ ನನ್ನ ಹೆಸರು ತೋರಿಸುತ್ತಿದ್ದಾರೆ ಎಂದರು. ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಬಿಎಸ್‌ವೈ, ಹಾಗಾದರೂ ಪ್ರಚಾರ ಸಿಗುತ್ತಲ್ಲಾ ಎಂದು ನಕ್ಕರು.

ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹಿರಿಯೂರಿಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಅವರನ್ನು ಸ್ವಾಗತಿಸಿದ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಯಡಿಯೂರಪ್ಪ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಬಿಜೆಪಿಗೆ ನಿರೀಕ್ಷೆ ಮೀರಿದ ಬೆಂಬಲ

ರಾಜ್ಯದಲ್ಲಿ ಬಿಜೆಪಿಗೆ ನಿರೀಕ್ಷೆ ಮೀರಿದ ಬೆಂಬಲ ಸಿಗುತ್ತಿದೆ. ಉತ್ತಮ ವಾತಾವರಣ ನಿರ್ಮಾಣವಾಗಿದೆ. ೧೪೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈಗಾಗಲೇ ಕೆಲವರು ನಾವೇ ಮುಂದಿನ ಮುಖ್ಯಮಂತ್ರಿ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಇದಕ್ಕೆ ಯಾವುದೇ ಅರ್ಥ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ಇನ್ನೂ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದರು.


Spread the love

About Laxminews 24x7

Check Also

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

Spread the love ಪಣಜಿ: ಝೋಸ್ಕಾ ಆಯಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವುದಾಗಿ ಹೇಳಿ ಮಹಿಳೆಯೊಬ್ಬರು 2.71 ಲಕ್ಷ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ