Breaking News

ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ

Spread the love

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಮದ್ಯ, ಹಣ, ಗಿಫ್ಟ್ ಸಾಗಾಟಗಳ ಮೇಲೆ ನಿಗಾವಹಿಸಿರುವ ಪೊಲೀಸರು, ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ಚುರುಕುಗೊಳಿಸಿದ್ದಾರೆ. ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಯಮಕನಮರಡಿ ಠಾಣೆ ಪೊಲೀಸರು ದಡ್ದಿ ಕ್ರಾಸ್ ಬಳಿ ಚೆಕ್ ಪೋಸ್ಟ್ ನಲ್ಲಿ ಇಂಡಿಕಾ ವಿಸ್ಟಾ ಕಾರನ್ನು ತಪಾಸಣೆ ನಡೆಸಿದ ವೇಳೆ ಕಾರಿನಲ್ಲಿ ವಿವಿಧ ಬಗೆಯ ಗೋವಾ ಮದ್ಯ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ತಕ್ಷಣ ಕಾರನ್ನು ವಶಕ್ಕೆ ಪಡೆದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

107 ಲಿಟರ್ 250 ಎಮ್.ಎಲ್.ದ ವಿವಿಧ ಕಂಪನಿಯ ಸರಾಯಿ ತುಂಬಿದ ಬಾಟಲಿಗಳನ್ನು ಮತ್ತು ಸಾಗಿಸಲು ಉಪಯೋಗಿಸಿದ ಒಂದು ಕಾರ್ ಸೇರಿ ಒಟ್ಟು 2.41.100/- ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹ ತಡೆದ ಬಾಲಕಿ: ವಿದ್ಯಾಭ್ಯಾಸಕ್ಕೆ ಬೆಳಕಾದ ತಹಶೀಲ್ದಾರ್

Spread the loveವಿಜಯನಗರ: ಬಾಲಕಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹವನ್ನು ತಾನೇ ತಡೆದ ಘಟನೆ ಜಿಲ್ಲೆಯ ಹಗರಿಬೊಮ್ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ