ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು, ಚುನಾವಣಾ ಅಕ್ರಮದ ಮೇಲೆ ದಾಳಿ ನಡೆಸಿದ್ದಾರೆ. ಪ್ರತಿ ದಿನ ಕಂತೆ ಕಂತೆ ಅಕ್ರಮ ಹಣ ಪತ್ತೆಯಾಗಿದೆ.
ಬೆಳಗಾವಿ ಮಾರ್ಕೆಟ್ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 13 ಲಕ್ಷ ಅಕ್ರಮ ಹಣ ವಶಕ್ಕೆ ಪಡೆದಿದ್ದಾರೆ.
ಪೋರ್ಟ್ ರಸ್ತೆಯ ಪೀಪಲಕಟ್ಟಾ ಚೆಕ್ ಪೋಸ್ಟ್ ಬಳಿ ಆಕ್ಟೀವಾ ವಾಹನ ತಪಾಸಣೆ ನಡೆಸಿದಾಗ ಡಿಕ್ಕಿಯಲ್ಲಿ 13 ಲಕ್ಷ ಅಕ್ರಮ ಹಣ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.
Laxmi News 24×7