ಬೆಳಗಾವಿ: ಇಲ್ಲಿನ ಪೀರನವಾಡಿ ಚೆಕ್ ಪೋಸ್ಟ್ ನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಬುಧವಾರ 2.89 ಲಕ್ಷ ರೂಪಾಯಿ ಜಪ್ತಿ ಮಾಡಿಕೊಂಡಿರುತ್ತದೆ.
ಚೆಕ್ ಪೋಸ್ಟ್ ಮೂಲಕ ಹೋಗುತ್ತಿದ್ದ ಇಂಡಿಕಾ ವಾಹನವನ್ನು ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡದ ಅಧಿಕಾರಿಗಳು ತಪಾಸಣೆ ನಡೆಸಿದ ಸಂದರ್ಭದಲ್ಲಿ ನಗದು ಪತ್ತೆಯಾಗಿರುತ್ತದೆ.
ನಗದು ಹಣವನ್ನು ಖಜಾನೆಯಲ್ಲಿ ಜಮಾ ಮಾಡಲಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Laxmi News 24×7