Breaking News

ದೂರು ನೀಡಲು ಬಂದಿದ್ದ ಯುವತಿ ಜೊತೆ ದುರ್ವರ್ತನೆ

Spread the love

ಬೆಂಗಳೂರು: ದೂರು ನೀಡಲು ಬಂದಿದ್ದ ಯುವತಿ ಜೊತೆ ದುರ್ವರ್ತನೆ ತೋರಿದ ಕೂಡಿಗೆಹಳ್ಳಿ ಠಾಣೆ ಪೊಲೀಸ್ ಇನಸ್ಪೆಕ್ಟರ್ ನ್ನು ಅಮಾನತುಗೊಳಿಸಲಾಗಿದೆ.

ರಾಜಣ್ಣ ಅಮಾನತುಗೊಂಡವ. ಪ್ರಕರಣವೊಂದರ ಸಂಬಂಧ ದೂರು ನೀಡಲು ಠಾಣೆಗೆ ಬಂದಿದ್ದ ಯುವತಿಯ ಮೊಬೈಲ್ ಸಂಖ್ಯೆ ಪಡೆದಿದ್ದ ರಾಜಣ್ಣ, ನಂತರ ಆಕೆಯೊಂದಿಗೆ ಅಸಭ್ಯ ಚಾಟಿಂಗ್ ಮಾಡಿದ್ದ. ಇನ್ನೊಮ್ಮೆ ಠಾಣೆಗೆ ಕರೆಸಿ ಡ್ರೈ ಫ್ರುಟ್ ಬಾಕ್ಸ್ ನೀಡಿ ತನ್ನ ರೂಮ್ ಗೆ ಬರುವಂತೆ ಕರೆದಿದ್ದ.

ರಾಜಣ್ಣನ ವರ್ತನೆಯಿಂದ ಬೇಸತ್ತ ಯುವತಿ ದಾಖಲೆಗಳ ಸಮೇತ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆಗೆ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀಪ್ರಸಾದ್ ಅವರು ಯಲಹಂಕ ಎಸಿಪಿಗೆ ಆದೇಶಿಸಿದ್ದರು. ತನಿಖೆಯಲ್ಲಿ ರಾಜಣ್ಣನ ಕೃತ್ಯಗಳು ಸಾಬೀತಾದ ಹಿನ್ನೆಲೆಯಲ್ಲಿ ವರದಿ ಪರಿಶೀಲಿಸಿದ ಪೊಲೀಸ್ ಆಯುಕ್ತರು ಅಮಾನತು ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ