Breaking News

ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಬಿಜೆಪಿ ವಕ್ತಾರನಿಗೆ ನೋಟಿಸ್

Spread the love

ಚಾಮರಾಜನಗರ: ಸಚಿವ ವಿ ಸೋಮಣ್ಣ (V Somanna) ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಚಾಮರಾಜನಗರ (Chamarajanagar) ಜಿಲ್ಲಾ ಬಿಜೆಪಿ ವಕ್ತಾರನಿಗೆ (BJP Spokesperson) ನೋಟಿಸ್ ನೀಡಲಾಗಿದೆ.

ಚಾಮರಾಜನಗರ ಜಿಲ್ಲಾ ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್‌ಗೆ ನೋಟೀಸ್ ಜಾರಿ ಮಾಡಲಾಗಿದೆ. ಸಚಿವ ಸೋಮಣ್ಣ ಅವರಿಗೆ ಮೈಸೂರು ವಿಭಾಗದ ಉಸ್ತುವಾರಿ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಟಿಕೆಟ್ ನೀಡುವುದು ಬೇಡ ಎಂದು ಬಿಜೆಪಿ ವಕ್ತಾರ ಶಿವಕುಮಾರ್ ಒತ್ತಾಯ ಮಾಡಿದ್ದರು.

ಚಾಮರಾಜನಗರದಲ್ಲಿ ಟಿಕೆಟ್ ನೀಡಿದರೆ ಗೋ ಬ್ಯಾಕ್ ಚಳವಳಿ ಮಾಡುತ್ತೇವೆ. ಸೋಮಣ್ಣ ಕಳೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಹಕರಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ವಿಫಲ ಎಂಬಿತ್ಯಾದಿಯಾಗಿ ಶಿವಕುಮಾರ್ ಬಹಿರಂಗವಾಗಿ ಆರೋಪ ಮಾಡಿದ್ದರು.

ಇದು ಜಿಲ್ಲಾ ಬಿಜೆಪಿಯ ನಿಲುವಲ್ಲ, ಅವರ ವೈಯಕ್ತಿಕ ಅಭಿಪ್ರಾಯ. ಅವರ ಹೇಳಿಕೆಗೂ ಜಿಲ್ಲಾ ಬಿಜೆಪಿಗೂ ಸಂಬಂಧವಿಲ್ಲ. ಶಿವಕುಮಾರ್ ಹೇಳಿಕೆಗಳನ್ನು ವರಿಷ್ಠರ ಗಮನಕ್ಕೆ ತರಲಾಗಿದೆ. ಶಿವಕುಮಾರ್‌ಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ಅವರ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ತಿಳಿಸಿದರು


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ