Breaking News

ಕರ್ನಾಟಕ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್ ಕಸರತ್ತು!

Spread the love

224 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಸೋಮವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು ಸಜ್ಜಾಗಿದೆ. ಬೆಂಗಳೂರು: 224 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಸೋಮವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು ಸಜ್ಜಾಗಿದೆ.

ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಕೆಲ ಕ್ಷೇತ್ರಗಳಿಗೆ ಪ್ರಬಲ ಅಭ್ಯರ್ಥಿಗಳು ಟಿಕೆಟ್ ಆಕಾಂಕ್ಷಿಗಳಾಗಿರುವುದರಿಂದ 30 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ನಿರ್ಣಾಯಕವಾಗಿದೆ ಎಂಬುದು ಪಕ್ಷದ ಒಳಗಿನವರ ಅಭಿಪ್ರಾಯ. ಟಿಕೆಟ್ ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದ್ದು, ಬಿಜೆಪಿಗೆ ಯಾವುದೇ ಲಾಭವಾಗದಂತೆ ಮುಖಂಡರು ಅಭ್ಯರ್ಥಿಗಳನ್ನು ಸೂಕ್ಷ್ಮವಾಗಿ ಪರಿಗಣಿಸುತ್ತಿದ್ದಾರೆ.

ಪಕ್ಷವು ಉಳಿದ 100 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಬೇಕಾಗಿದೆ.ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿರುವ ಮಾಜಿ ಎಂಎಲ್ಸಿಗಳಿಗೆ ಪಕ್ಷ ಅವಕಾಶ ಕಲ್ಪಿಸಬೇಕು. ಕಾಂಗ್ರೆಸ್ಗಾಗಿ ವರ್ಷಗಳಿಂದ ದುಡಿದ ನಾಯಕರನ್ನೂ ಪರಿಗಣಿಸಬೇಕು ಎಂದು ಪಕ್ಷದ ಮುಖಂಡರು ಈಗಾಗಲೇ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಏಪ್ರಿಲ್ ಮೊದಲ ಅಥವಾ ಎರಡನೇ ವಾರದಲ್ಲಿ 100 ಅಭ್ಯರ್ಥಿಗಳ ಘೋಷಣೆ ಕುರಿತು ನಾಯಕರು ಎರಡನೇ ಸುತ್ತಿನ ಸಭೆ ನಡೆಸುವ ಸಾಧ್ಯತೆಯಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ