Breaking News

ಬೆಳಗಾವಿ: ತಪ್ಪಿದ ಕಾಂಗ್ರೆಸ್‌ ಟಿಕೆಟ್: ಆಕ್ರೋಶ

Spread the love

ಬೆಳಗಾವಿ: ಜಿಲ್ಲೆಯ ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅರ್ಜುನ ಗುಡ್ಡದ ಹಾಗೂ ಖಾನಾಪುರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಇರ್ಫಾನ್‌ ತಾಳಿಕೋಟಿ ಅವರು ಟಿಕೆಟ್ ಸಿಗದ ಕಾರಣ ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅರ್ಜುನ ಗುಡ್ಡದ, ‘ಮಾಜಿ ಶಾಸಕ ಅಶೋಕ ಪಟ್ಟಣ ಅವರಿಗೆ ರಾಮದುರ್ಗ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದ್ದು ಸರಿಯಲ್ಲ. ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ, ಸಿದ್ದರಾಮಯ್ಯ ಅವರ ಮೇಲೆ ಒತ್ತಡ ತಂದು ಟಿಕೆಟ್ ಪಡೆದುಕೊಂಡಿದ್ದಾರೆ. ನಾನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ’ ಎಂದರು.

ಖಾನಾಪುರ ಟಿಕೆಟ್‌ ಅನ್ನು ಹಾಲಿ ಶಾಸಕಿ ಡಾ.ಅಂಜಲಿ ನಿಂಬಾಳಕರಗೆ ನೀಡಿದ್ದರಿಂದ, ಆಕಾಂಕ್ಷಿ ಇರ್ಫಾನ್‌ ತಾಳಿಕೋಟಿ ಬಂಡಾಯ ಏಳುವುದಾಗಿ ತಿಳಿಸಿದ್ದಾರೆ. ಇರ್ಫಾನ್‌ ಅವರು ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ ರೂವಾರಿ ಕರೀಂ ಲಾಲಾ ತೆಲಗಿ ಅವರ ಅಳಿಯ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ