ಕೂಡ್ಲಿಗಿ, ಮಾರ್ಚ್, 28: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಬೆಳವಣಿಗೆಗಳು ಆಗುತ್ತಲೇ ಇವೆ. ರಾಜಕೀಯ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುತ್ತಿದ್ದು, ಎಲ್ಲಾ ಪಕ್ಷಗಳಲ್ಲಿ ಇದೀಗ ಬಂಡಾಯದ್ದೇ ಚಿಂತೆ ಆಗಿದೆ.
ಇದೇ ರೀತಿ ಇಂದು ಕೂಡ್ಲಿಗಿ ಬಿಜೆಪಿ ಶಾಸಕ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಶಾಸಕ ಗೋಪಾಲಕೃಷ್ಣ ಅವರು ನಿನ್ನೆ ಕಾಂಗ್ರೆಸ್ ಮುಖಂಡರನ್ನು ಭೇಟಿ ಆಗಿದ್ದು, ಇಂದು ಕೊನೆಗೂ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೂಡ್ಲಿಗಿ ವಿಧಾಸಭಾ ಕ್ಷೇತ್ರದಲ್ಲಿ 6 ಬಾರಿ ಶಾಸಕರಾಗಿರುವ ಎನ್.ವೈ.ಗೋಪಾಲಕೃಷ್ಣ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ.
ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ಮಾಜಿ ಶಾಸಕ
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾಯಕನಹಟ್ಟಿಯಲ್ಲಿ ರಾಜಕೀಯ ವಿಚಾರಕ್ಕೆ ಕಾಂಗ್ರೆಸ್, ಬಿಜೆಪಿ ನಡುವೆ ಗಲಾಟೆ ನಡೆದಿತ್ತು. ಇದೇ ಸ್ಥಳದಲ್ಲೇ ಬದ್ಧವೈರಿಗಳಿಬ್ಬರೂ ಒಂದಾಗಿರುವ ಘಟನೆ ಇತ್ತೀಚೆಗಷ್ಟೇ ನಡೆದಿತ್ತು.
 Laxmi News 24×7
Laxmi News 24×7
				 
		 
						
					 
						
					 
						
					