Breaking News

ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ

Spread the love

ವದೆಹಲಿ: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಬಗ್ಗೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು​ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

 

ಈ ಬಾರಿಯ ಚುನಾವಣೆಯಲ್ಲಿ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ. 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮತ್ತು ಹಾಸಿಗೆ ಬಿಟ್ಟು ಎದ್ದೇಳಲು ಸಾಧ್ಯವಾಗದವರು, ಗಂಭೀರ ಖಾಯಿಲೆಯಿಂದ ಬಳಲುತ್ತಿರುವವರು ಮನೆಯಿಂದಲೇ ಈ ಬಾರಿ ಮತದಾನ ಮಾಡಬಹುದಾಗಿದೆ.ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದಾರೆ. ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ