Breaking News

ತಂದೆಯನ್ನು ಬಿಜೆಪಿ ಮರೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ವಿಜೇತಾ ಅನಂತಕುಮಾರ್

Spread the love

ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವಾಗ ಪಕ್ಷಗಳ ವಿರುದ್ಧ ಕೆಲವು ನಾಯಕರಿಂದ ಅಸಮಾಧಾನ ವ್ಯಕ್ತವಾಗುವುದು ಸಹಜ. ಇದೀಗ ಬಿಜೆಪಿ ವಿರುದ್ಧ ಮಾಜಿ ಸಚಿವ ಅನಂತಕುಮಾರ್ ಕುಟುಂಬದಿಂದ ಬೇಸರವೊಂದು ವ್ಯಕ್ತವಾಗಿದೆ. ಆದರೆ ಇದು ಚುನಾವಣೆ ವಿಚಾರಕ್ಕಾಗಿ ಅಲ್ಲ.

 

ಕೇಂದ್ರದ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕರಾಗಿದ್ದ ಅನಂತಕುಮಾರ್ ಅವರ ಪುತ್ರಿ ವಿಜೇತಾ ಅನಂತಕುಮಾರ್ ಬಿಜೆಪಿ ವಿರುದ್ಧ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಭಾರತೀಯ ಜನತಾ ಪಕ್ಷವು ನನ್ನ ತಂದೆಯನ್ನು ಮರೆಯುತ್ತಿದೆ ಎಂಬುದನ್ನು ಅರಿತುಕೊಳ್ಳಬೇಕಿದೆ ಎಂದೂ ಅವರು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.

 

ಅಪ್ಪ 1987ರಲ್ಲಿ ಔಪಚಾರಿಕವಾಗಿ ಬಿಜೆಪಿಗೆ ಸೇರಿದರು ಮತ್ತು ತಮ್ಮ ಕೊನೆಯ ಉಸಿರು ಇರುವವರೆಗೂ ಕೆಲಸ ಮಾಡಿದರು. ಉದ್ಘಾಟನಾ ಕಾರ್ಯಕ್ರಮಗಳು, ರಸ್ತೆಗಳು, ರೈಲು ಮಾರ್ಗಗಳಲ್ಲಿ ಅವರ ಹೆಸರನ್ನು ಉಲ್ಲೇಖಿಸುವ ಮೂಲಕ ಅವರ ಕೊಡುಗೆಗಳನ್ನು ಪಕ್ಷ ಗುರುತಿಸದಿರುವುದು ಕ್ಷುಲ್ಲಕವಾಗಿದೆ ಎಂದಿರುವ ಅವರು, ತಂದೆ ಲಕ್ಷಾಂತರ ಜನರ ಹೃದಯದಲ್ಲಿ ಜೀವಂತವಾಗಿದ್ದಾರೆ ಎಂದಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ