Breaking News

ಸಧ್ಯದಲ್ಲಿಯೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ:B.S.Y.

Spread the love

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಈಗಗಲೇ ದಿನಾಂಕ ಘೋಷಣೆಯಾಗಿದೆ. ಬಿಜೆಪಿ ಚುನಾವಣೆಗೆ ಸಿದ್ಧವಾಗಿದ್ದು, ಈಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ 4 ತಂಡಗಳಾಗಿ ವಿಜಯಸಂಕಲ್ಪ ಯಾತ್ರೆ ಮಾಡಿದ್ದೇವೆ. ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದ್ದು, ಬಿಜೆಪಿ ಮತ್ತೆ ಅದಿಕಾರಕ್ಕೆ ಬರುವುದು ಸೂರ್ಯ, ಚಂದ್ರ ಇರುವಷ್ಟೇ ಸತ್ಯ ಎಂದು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬಿಜೆಪಿಯ ಎಲ್ಲಾ ಸಂಸದರ ಸಭೆ ನಡೆಸಲಾಗುತ್ತದೆ. ಸಂಸದರು, ಬಿಜೆಪಿ ಮುಖಂಡರು ಸೇರಿ ರಾಜ್ಯದಲ್ಲಿ ಪ್ರವಾಸ ಮಾಡುತ್ತೇವೆ. ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ. ಸಧ್ಯದಲ್ಲಿಯೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಸಿಎಂ ಬೊಮ್ಮಾಯಿ ಅವರು ಮೀಸಲಾತಿ ಹೆಚ್ಚಳ ಮಾಡಿರುವುದು ಎಲ್ಲಾ ವರ್ಗದವರಿಗೆ ನ್ಯಾಯ ಒದಗಿಸುವ ಕ್ರಮವಾಗಿದೆ. ನಾನು ಸಿಎಂ ಆಗಿದ್ದಾಗ ರಾಜ್ಯದ ಜನರಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇನೆ. ಅಮಿತ್ ಶಾ ಇನ್ನೂ 3-4 ಬಾರಿ ರಾಜ್ಯಕ್ಕೆ ಆಗಲಿಸಲಿದ್ದಾರೆ. 130 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.


Spread the love

About Laxminews 24x7

Check Also

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

Spread the love ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು ಅಮೆರಿಕಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ