Breaking News

ಹುಬ್ಬಳ್ಳಿಯಲ್ಲಿ ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಿಂದ ಆಟೋ ಡ್ರೈವರ್​​ಗಳಿಗೆ ಫ್ಯಾನ್

Spread the love

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೇ 10ರಂದು ಮತದಾನ ನಡೆಯಲಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಇನ್ನು ಮಂತ್ರಿಗಳು , ಶಾಸಕರು ತಾವು ಇದ್ದ ಜಾಗದಲ್ಲಿಯೇ ಸರ್ಕಾರಿ ಸವಲತ್ತುಗಳನ್ನು ಬಿಟ್ಟು ಹೋಗಿದ್ದಾರೆ.

 

ಈ ನಡುವೆಯೇ ಮತದಾರರನ್ನು ಸೆಳೆಯಲು ರಾಜಕೀಯ ನಾಯಕರು ನಾನಾ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆ ಮತದಾರರಿಗೆ ಆಮಿಷ ಒಡ್ಡುವ ಸಲುವಾಗಿ ಗಿಫ್ಟ್‌ ಹಂಚುತ್ತಿದ್ದಾರೆ. ಅಕ್ರಮವನ್ನು ನಡೆಯುವುದಕ್ಕೆ ರಾಜ್ಯದಲ್ಲಿ ಪೊಲೀಸರು ಅಲರ್ಟ್‌ ಆಗಿದ್ದಾರೆ. ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಯಾವುದೇ ಅಕ್ರಮವಾಗಿ ಕೆಲಸಗಳು ನಡೆಯದಂತೆ ಚೆಕ್‌ ಪೋಸ್ಟ್‌ ಗಳನ್ನು ತೆರೆಯಲಾಗಿದೆ.

ಇದೀಗ ಹುಬ್ಬಳ್ಳಿಯಲ್ಲಿ ಹು-ಧಾ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್​​​ ಆಕಾಂಕ್ಷಿ ಅನಿಲ್ ಕುಮಾರ್ ಹುಬ್ಬಳ್ಳಿಯಲ್ಲಿ ಆಟೋ ಚಾಲಕರಿಗೆ ಸನ್ಮಾನ ಮಾಡಿ ಫ್ಯಾನ್ ವಿತರಣೆ ಮಾಡಿದ್ದಾರೆ. ತಮ್ಮ ಕಚೇರಿಯಲ್ಲಿ 50ಕ್ಕೂ ಹೆಚ್ಚು ಆಟೋ ಡ್ರೈವರ್​​ಗಳಿಗೆ ಫ್ಯಾನ್ ವಿತರಿಸಿದ್ದಾರೆ.
ಇನ್ನು ಬ್ಯಾಡರಹಳ್ಳಿಯ ಮಹದೇಶ್ವರನಗರ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 12,500 ಕುಕ್ಕರ್ ಹಾಗೂ ಗ್ಯಾಸ್ ಸ್ಟವ್​ಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತದಾರರಿಗೆ ಗಿಫ್ಟ್ ಹಂಚುತ್ತಿದ್ದ ಆರೋಪ : ಶಾಸಕ ಶಾಮನೂರು, ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ `FIR’ ದಾಖಲು

ದಾವಣಗೆರೆ : ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿರುವ ಆರೋಪದಡಿ ಶಾಸಕ ಶಾಮನೂರು ಶಿವಶಂಕರಪ್ಪ, ಪುತ್ರ ಎಸ್.ಎಸ್ ಮಲ್ಲಿಕಾರ್ಜುನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಗಿಫ್ಟ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಉಡುಗೊರೆಗಳ ಮೇಲೆ ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಹಾಗೂ ಪುತ್ರ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭಾವಚಿತ್ರವಿದ್ದ ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ, ದಾವಣಗೆರೆ ಉತ್ತರ ಕ್ಷೇತ್ರದ ಮಾಜಿ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ದೂರು ದಾಖಲಾಗಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ