Breaking News
Home / ರಾಜಕೀಯ / ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

Spread the love

ಬೆಳಗಾವಿ: ನಿಪ್ಪಾಣಿ‌ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ಅತಿಶಿನ-ಕುಂಕುಮ‌ ಕಾರ್ಯಕ್ರಮ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ‌ ಮೇಲೆ ಸಚಿವೆ ಶಶಿಕಲಾ‌ ಜೊಲ್ಲೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

 

ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಅರಿಶಿನ- ಕುಂಕುಮ ಕಾರ್ಯಕ್ರಮ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಶಶಿಕಲಾ‌ಜೊಲ್ಲೆ ಹಾಗೂ ರಣರಾಗಿನಿ‌ ಮಹಿಳಾ ಮಂಡಳ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅತಿಶಿನ‌ ಕುಂಕುಮ ಕಾರ್ಯಕ್ರಮದಲ್ಲಿ ಶಶಿಕಲಾ ಜೊಲ್ಲೆ ಸಭಿಕರೊಂದಿಗೆ ಕುಳಿತುಕೊಂಡಿದ್ದರು. ಈ ವೇಳೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಶಿಕಲಾ ಜೊಲ್ಲೆ ಇರುವ ಹಾಡಿನ ವಿಡಿಯೋ ಬಿತ್ತರಿಸಲಾಗಿತ್ತು. ಬಿಜೆಪಿ ಚಿಹ್ನೆಯನ್ನೂ ಪ್ರದರ್ಶಿಸಲಾಗಿತ್ತು. ನಂತರ ಎಲ್ಲರಿಗೂ ಸಾಮೂಹಿಕ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು.

ಚುನವಣಾ ಅಧಿಕಾರಿಗಳು ನೀಡಿದ ಅನುಮತಿ ಉಲ್ಲಂಘಿಸಿದ್ದರಿಂದ ನಿಪ್ಪಾಣಿ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ನಿಪ್ಪಾಣಿ ನಗರಸಭೆ ಪೌರಾಯುಕ್ತ ಜಗದೀಶ ಹುಲಗಜ್ಜೆ ದೂರು ನೀಡಿದ್ದಾರೆ.


Spread the love

About Laxminews 24x7

Check Also

ಮೂಡಲಗಿ | ಕಾರು ಡಿಕ್ಕಿ: ಬಾಲಕ ಸಾವು

Spread the love ಮೂಡಲಗಿ: ತಾಲ್ಲೂಕಿನ ನಾಗನೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಮೀಪ ಸೋಮವಾರ ಮೂಡಲಗಿ- ಗೋಕಾಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ