Breaking News

ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ ರೂಪಾಯಿ ನಗದನ್ನು ಜಪ್ತಿ ಮಾಡಿದ ಪೊಲೀಸರು.

Spread the love

ಕಲಬುರ್ಗಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ಅಕ್ರಮ ತಡೆಯಲು ಪೊಲೀಸರು ಎಷ್ಟೇ ಸಜ್ಜಾಗಿದ್ದರೂ ಪೊಲೀಸರ ಕಣ್ತಪ್ಪಿಸು ಹೋಗಿ ಹಲವರು ಸಿಕ್ಕಿ ಬೀಳುತ್ತಿದ್ದಾರೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ ರೂಪಾಯಿ ನಗದನ್ನು ಕಲಬುರ್ಗಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಕಲಬುರ್ಗಿಯ ಫರಹತಾಬಾದ್ ಚೆಕ್ ಪೋಸ್ಟ್ ನಲ್ಲಿ ಕಾರನ್ನು ತಡೆದ ಪೊಲೀಸರು ಪರಿಶೀಲನೆ ನಡೆಸಿದಾಗ 1 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ರವಿ ಎಂಬುವವರು ಈ ಹಣವನ್ನು ಸಾಗಿಸುತ್ತಿದ್ದರು. ರವಿ ಎಂಬುವವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ