Breaking News

BJPಯಿಂದ ಜೆಡಿಎಸ್​ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ;

Spread the love

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್​ ಡಿ ಕುಮಾರಸ್ವಾಮಿ ಖೂಬಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

 

 

ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

 

ಖೂಬಾ ಅವರು ಈ ಹಿಂದೆ ಕೂಡಾ ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್​​ ಅಭ್ಯರ್ಥಿ ಬಿ. ನಾರಾಯಣ ರಾವ್​ ವಿರುದ್ಧ ಸೋಲುಂಡಿದ್ದರು. 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದು, ಆದರೆ ಬಿಜೆಪಿ ಖೂಬಾ ಅವರಿಗೆ ಟಿಕೆಟ್​ ನೀಡದೆ ಶರಣು ಸಲಗಾರಗೆ ಟಿಕೆಟ್​ ನೀಡಲಾಗಿತ್ತು. ಇದರಿಂದ ಅವರು ಅಸಮಾಧಾನಗೊಂಡಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ