Breaking News

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನ್ಯಾಯಾಂಗ ಬಂಧನಕ್ಕೆ

Spread the love

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಶಾಸಕರು ಜೈಲುಪಾಲಾಗಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಕಸ್ಟಡಿಗೆ ವಹಿಸಿ ಈ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿತ್ತು. ಇಂದು ಮಾಡಾಳ್ ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಮಾಡಾಳ್ ಅವರಿಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ