ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ ವರುಣಾ ಹಾಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಮೂಡಿತ್ತು. ಇದೀಗ ಯತೀಂದ್ರ ಸಿದ್ದರಾಮಯ್ಯ ಚುನಾವಣಾ ಅಖಾಡದಿಂದಲೇ ಹಿಂದೆ ಸರಿಯುವ ಮಾತುಗಳನ್ನಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ವರುಣಾ ಅಥವಾ ಬೇರೆ ಯಾವುದೇ ಕ್ಷೇತ್ರಗಳಿಂದಲೂ ನಾನು ಚುನಾವಣೆಗೆ ಸ್ಪರ್ಧಿಸಲ್ಲ. ಈಬಾರಿ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ತಂದೆಯವರ ಪರವಾಗಿ ಜನವರಿಯಿಂದ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೆ. ಅವರ ಪರವಾಗಿ ಕೆಲಸ ಮಾಡುತ್ತೇನೆ. ಇದು ತಂದೆಯವರ ಕೊನೇ ಚುನಾವಣೆ. ಹಾಗಾಗಿ ಅವರು ವರುಣಾದಲ್ಲಿ ನಿಲ್ಲಬೇಕು ಎಂಬುದು ಜನರ ಆಶಯ ಎಂದು ಹೇಳಿದರು.
Laxmi News 24×7