ಹುಕ್ಕೇರಿ: ‘ತಮ್ಮ ಕುಟುಂಬದ ಯಾವುದೇ ಸದಸ್ಯ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆ ಇಲ್ಲ. ನಾನು ಬೇರೆ ಪಕ್ಷ ಸೇರುತ್ತೇನೆ ಎಂಬುದು ಗಾಳಿ ಸುದ್ದಿ. ಜನ ಇದನ್ನು ಗಮನಕ್ಕೆ ತೆಗೆದುಕೊಳ್ಳಬಾರದು’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಸ್ಪಷ್ಟಪಡಿಸಿದರು.
ಪಟ್ಟಣದ ವಿಶ್ವರಾಜ್ ಭವನದಲ್ಲಿ ಹುಕ್ಕೇರಿ ಮಂಡಲ ವತಿಯಿಂದ ಗುರುವಾರ ಆಯೋಜಿಸಿದ್ದ ಬಿಜೆಪಿ ಚುನಾವಣಾ ತಯಾರಿ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದರು.’ತಮ್ಮ ಕುಟುಂಬದಲ್ಲಿ ಟಿಕೆಟ್‌ಗಾಗಿ ಪೈಪೋಟಿ ನಡೆದಿದೆ, ಕುಟುಂಬದಲ್ಲಿ ಬಿರುಕು ಬಿಟ್ಟಿದೆ ಎಂಬ ಗಾಳಿ ಸುದ್ದಿಯನ್ನು ನಮಗೆ ಆಗದವರು ಹರಡುತ್ತಿದ್ದಾರೆ. ಬಿಜೆಪಿ ವರಿಷ್ಠರು ಕುಟುಂಬದ ಯಾರಿಗೆ ಟಿಕೆಟ್ ಕೊಟ್ಟರೂ ಆಯ್ಕೆ ಮಾಡಲು ಶ್ರಮಿಸೋಣ. ಉಮೇಶ ಕತ್ತಿ ಅವರ ಕನಸು ನನಸು ಮಾಡೋಣ’ ಎಂದರು.
Laxmi News 24×7