Breaking News

ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ JDS ಶಾಸಕ ಕೆ.ಎಂ. ಶಿವಲಿಂಗೆ ಗೌಡ

Spread the love

ಶಿರಸಿ: ಚುನಾವಣೆ ಘೋಷಣೆಯಾದ ಬಳಿಕ ಪಕ್ಷಾಂತರ ಹೆಚ್ಚಾಗಿದೆ. ಜೆಡಿಎಸ್‌ನ ಶಾಸಕ ಕೆ. ಎಂ. ಶಿವಲಿಂಗೆ ಗೌಡ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದು ಶಿರಸಿಯ ಗೃಹ ಕಚೇರಿಯಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿದ ಅರಸೀಕರೆಯ ಜೆಡಿಎಸ್ ಶಾಸಕ ಕೆ.

ಎಂ. ಶಿವಲಿಂಗೆ ಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಅರಸೀಕರೆಯಲ್ಲಿ ಕಳೆದ ತಿಂಗಳು ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಡೆದಿತ್ತು. ಪಕ್ಷದ ಚಟುವಟಿಕೆಗಳಿಂದ ದೂರ ಇದ್ದ ಅರಸೀಕರೆಯ ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೆ ಗೌಡ ಸಮಾವೇಶದಲ್ಲಿ ಪಾಲ್ಗೊಂಡಿರಲಿಲ್ಲ. ಕೆಲವು ದಿನಗಳಿಂದ ಅವರು ಜೆಡಿಎಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದೀಗ ರಾಜೀನಾಮೆ ಸಲ್ಲಿಸಿದ್ದಾರೆ.

ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್. ಅರಕಲಗೂಡು ಕ್ಷೇತ್ರದ ಶಾಸಕ ಎ. ಟಿ. ರಾಮಸ್ವಾಮಿ ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷ ತೊರೆದಿದ್ದಾರೆ. ಕರ್ನಾಟಕದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಮೇ 10ರ ಬುಧವಾರ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ