Breaking News

ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ : ಎಚ್. ವಿಶ್ವನಾಥ್

Spread the love

ಮೈಸೂರು: ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ. ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕೆ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಪಶ್ಚಾತಾಪವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿ ಮಾತನಾಡಿದ, ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ. ಪಾಪದ ಹೊರೆ ಇಳಿಸಿ ಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ. ನಾನು ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯನಾಗಿಲ್ಲ. ಸಾಹಿತ್ಯ ಕೋಟಾದಲ್ಲಿ ಎಂಎಲ್​ಸಿ ಆಗಿದ್ದೇನೆ. ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ.

ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ. ಡಬಲ್ ಇಂಜಿನ್ ಸರ್ಕಾರ ಇದ್ದರೆ ರಾಜ್ಯಕ್ಕೆ ಒಳಿತೆಂದು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದೆವು. ಆದರೆ, ಬಿಜೆಪಿ ಸರರ್ಕಾರ ಪರಮ ಭ್ರಷ್ಟ ಸರ್ಕಾರವಾಗಿದೆ. ಇಂತಹ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ ಎಂದು ಹೇಳಿ ಬೇಸರ ಹೊರಗಹಾಕಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ಅಡಗೂರು ಎಚ್.ವಿಶ್ವನಾಥ್, 2018 ರ ಚುನಾವಣೆ ಬಳಿಕ ಅಸ್ಥಿತ್ವದಲ್ಲಿದ್ದ ಕಾಂಗ್ರೆಸ್- ಜೆಡಿಎಸ್ ಸರಕಾರ ಪತನಗೊಂಡು, ನೂತನವಾಗಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಕಾರಣಕರ್ತರು. ಇದೀಗ ಬಿಜೆಪಿ ಸರಕಾರದ ತೀರ್ಮಾನಗಳ ವಿರುದ್ಧ ಎಚ್.ವಿಶ್ವನಾಥ್ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ