Breaking News

ಚುನಾವಣಾ ಅಧಿಕಾರಿಯ ದೂರಿನ ಹಿನ್ನೆಲೆಯಲ್ಲಿ ಮಾಜಿ ಸಚಿವರ ಮೇಲೆ ಎಫ್​ಐಆರ್​!

Spread the love

ಬೆಂಗಳೂರು: ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ ಎಫ್​ಐಆರ್​ ದಾಖಲಾಗಿದೆ.

ಚುನಾವಣಾ ಅಧಿಕಾರಿ ಲಕ್ಷ್ಮಣ್ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಕೃಷ್ಣಯ್ಯ ಶೆಟ್ಟಿ ಗಾಂಧಿನಗರದ ಟಿಕೆಟ್ ಆಕಾಂಕ್ಷಿಯಾಗಿದ್ದು ಗಾಂಧಿನಗರ ಕ್ಷೇತ್ರದ ಹೆಸರು ಮತ್ತು ಕೃಷ್ಣಯ್ಯ ಶೆಟ್ಟಿ ಹೆಸರಲ್ಲಿ ಪುಡ್ ಕಿಟ್ ತಯಾರಿ ಮಾಡಲಾಗುತ್ತಿತ್ತು.

 

ಈ ವೇಳೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ್ದರು. ದಾಳಿಯ ಸಂದರ್ಭ ಅಕ್ಕಿ, ಬೆಳೆ, ಬೆಲ್ಲ, ಡ್ರೈಪ್ರೂಟ್ಸ್, ಆಡುಗೆ ಎಣ್ಣೆ ಸೇರಿದಂತೆ ಗೃಹ ಬಳಕೆ ದಿನಸಿ ವಶಕ್ಕೆ ಪಡೆದಿದ್ದರು. ಈ ಸಂದರ್ಭ ಸುಮಾರು ಏಳೆಂಟು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಪತ್ತೆಯಾಗಿತ್ತು.

ಸದ್ಯ ಪ್ರಕರಣ ದಾಖಲಿಸಿಕೊಂಡು ಕೃಷ್ಣಯ್ಯ ಶೆಟ್ಟಿಗೆ ನೊಟೀಸ್ ನೀಡಲು ಪೊಲೀಸರು ಮುಂದಾಗಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ