Breaking News

ಬೆಳಗಾವಿ: ಶಾಸಕರ ಪುತ್ರನ ವಾಹನ ತಪಾಸಣೆ ಮಾಡದ ಸಿಬ್ಬಂದಿ ತರಾಟೆಗೆ

Spread the love

ಬೆಳಗಾವಿ: ಚೆಕ್‌ಪೋಸ್ಟ್‌ನಲ್ಲಿ ಶಾಸಕ ಶ್ರೀಮಂತ ಪಾಟೀಲ ಅವರ ಪುತ್ರ ಶ್ರೀನಿವಾಸ ಸಂಚರಿಸುತ್ತಿದ್ದ ವಾಹನವನ್ನು ತಪಾಸಣೆ ಮಾಡದೆ ಬಿಟ್ಟ ಅಧಿಕಾರಿಗಳನ್ನು ತಹಶೀಲ್ದಾರ್‌ ಎಂ.ಎನ್.ಬಳಿಗಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಗವಾಡ-ಮೀರಜ್‌ ಚೆಕ್‌ಪೋಸ್ಟ್‌ನಲ್ಲಿ ಶನಿವಾರ ಪ್ರತಿ ವಾಹನ ತಪಾಸಣೆ ಮಾಡಲಾಗುತ್ತಿತ್ತು.

ಆದರೆ, ಸಾಂಗ್ಲಿಯಿಂದ ಕಾಗವಾಡಕ್ಕೆ ಬರುತ್ತಿದ್ದ ಶಾಸಕರ ಪುತ್ರನ ವಾಹನವನ್ನು ತಪಾಸಣೆ ಮಾಡಿಲ್ಲ. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ.

ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಬಳಿಗಾರ ಸ್ಥಳಕ್ಕೆ ಧಾವಿಸಿ, ಚೆಕ್‌ಪೋಸ್ಟ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಪ್ರತಿ ವಾಹನ ಕಡ್ಡಾಯವಾಗಿ ತಪಾಸಣೆ ಮಾಡುವಂತೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ನೇಕಾರರ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ

Spread the love ನೇಕಾರರ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ ಯಮಕಮರಡಿ: ನೇಕಾರರ ಸಮಗ್ರ ಅಭಿವೃದ್ಧಿಗೆ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ