Breaking News

ಡಿ.ಕೆ.ಶಿ. ವಿರುದ್ಧ FIR ದಾಖಲು

Spread the love

ಮಂಡ್ಯ: ಮಂಡ್ಯದಲ್ಲಿ ರೋಡ್ ಶೋ ವೇಳೆ ಕಲಾವಿದರತ್ತ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ರೋಡ್ ಶೋ ವೇಳೆ ಡಿ.ಕೆ.ಶಿವಕುಮಾರ್ ಕಲಾವಿದರತ್ತ ಹಣ ಎರಚಿದ್ದರು. ಈ ಬಗ್ಗೆ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ದಾಖಲಿಸಿದ್ದರು. ಎನ್ ಸಿ ಆರ್ ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಈಗ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ