Breaking News

ನನ್ನ ಕಾರ್ಯಕರ್ತರೇ ನನಗೆ ಸ್ಟಾರ್ ಕ್ಯಾಂಪೇನರ್; ಎಚ್​ಡಿಕೆ

Spread the love

ಬೆಂಗಳೂರು: ನಟರನ್ನು ನೋಡಲು ಅಭಿಮಾನಿಗಳು, ಜನರು ಬರುತ್ತಾರೆ, ಜೈಕಾರ ಹಾಕುತ್ತಾರೆ. ಅವರು ಎಲ್ಲಾ ಪಕ್ಷದ ಪರವಾಗಿಯೂ ಪ್ರಚಾರಕ್ಕೆ ಹೋಗುತ್ತಾರೆ. ಅವರಿಗೆ ಸ್ಥಿರತೆ ಇಲ್ಲ. ವೈಯಕ್ತಿಕ ಬಾಂಧವ್ಯದ ಹಿನ್ನೆಲೆ ಹೋಗಬಹುದು. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳುವ ಮೂಲಕ ನಟ ಸುದೀಪ್ ಬೊಮ್ಮಾಯಿ ಪರ ಪ್ರಚಾರಕ್ಕೆ ಬರುವುದಾಗಿ ಘೋಷಣೆ ಮಾಡುತ್ತಿದ್ದಂತೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

 

ನಟ ಸುದೀಪ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಮೇಲಿನ ವಿಶ್ವಾಸದಿಂದ ಪ್ರಚಾರಕ್ಕೆ ಹೋಗುತ್ತೇನೆ ಎಂದು ಹೇಳಿದ್ದಾರೆ. ಆ ಬಗ್ಗೆ ಹೆಚ್ಚಿನ ಮಹತ್ವ ಕೊಡುವ ಅವಶ್ಯಕತೆ ಇಲ್ಲ. ನನ್ನ ಸ್ಟಾರ್ ಪ್ರಚಾರಕರು ನನ್ನ ಕಾರ್ಯಕರ್ತರು. ನಾನು ಪಂಚರತ್ನ ಯಾತ್ರೆ ಮೂಲಕ ಜನರ ಬಳಿ ಹೋಗಿದ್ದೇನೆ ಎಂದರು.


Spread the love

About Laxminews 24x7

Check Also

ಕೈದಿಗಳಿಗೆ ರಾಜಾತಿಥ್ಯ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: B.J.P.

Spread the love ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ