Breaking News

ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನು ಬರ್ಬರವಾಗಿ ಕೊಲೆ

Spread the love

ಬೆಂಗಳೂರು : ಬೆಂಗಳೂರಿನ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ.

 

ಮೃತ ಮಹಿಳೆ ಜಯಮಹಲ್ ಲೇಔಟ್ ನಿವಾಸಿ ಜಯಂತಿ ಎಂದು ತಿಳಿದುಬಂದಿದೆ.

ಮೃತ ಮಹಿಳೆ ಗಂಡ ಬ್ಯೂಟಿ ಪಾರ್ಲರ್ ಮಹಿಳೆ ಜೊತೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದನು ಎಂದು ಆರೋಪಿಸಲಾಗಿದೆ. ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆಕೆಯ ಶವವನ್ನು ಆಸ್ಪತ್ರೆಗೆ ತಂದು ಹಾಕಿ ಪರಾರಿಯಾಗಿದ್ದಾನೆ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ವಿಜಯಪುರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ