Breaking News

ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯ

Spread the love

ರಾಯಚೂರು : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯಗಳಾದ ಘಟನೆ ಪಟ್ಟಣದ ನೇತಾಜಿ ನಗರದ ಮನೆಯೊಂದರಲ್ಲಿ ನಡೆದಿದೆ.

ಶಂಕುದ್ದೀನ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟವಾಗಿದ್ದು, ಮನೆಯಲ್ಲಿದ್ದ ಅಂಜುಮ್, ನಪೀಜಾ ಬಾನು ಹಾಗೂ ಪದ್ಮಾವತಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ

ದಲಿತ ಕುಟುಂಬದ ಮೇಲೆ ಹಲ್ಲೆ : ಪೊಲೀಸರ ನಡೆ ಖಂಡಿಸಿ ಇಂದು ಶ್ರೀರಂಗಪಟ್ಟಣ ಬಂದ್ ಗೆ ಕರೆ

ಮಂಡ್ಯ : ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ಪುಂಡರ ಮೇಲೆ ಪೊಲೀಸರು ಕ್ರಮ ಕೈಗೊಳ್ಳದೇ ಅಪರಾಧಿಗಳನ್ನು ಬಂಧಿಸಿಲ್ಲ ಎಂದು ಪೊಲೀಸರ ನಡೆ ಖಂಡಿಸಿ ಇಂದು ಶ್ರೀರಂಗಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.

ಕಳೆದ ವಾರ ಕೆ ಆರ್ ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಲಿತ ಕುಟುಂಬದ ಮೇಲೆ ಮುಸ್ಲಿಂ ಪುಂಡರು ಹಲ್ಲೆ ನಡೆಸಿದ್ದರು ಎನ್ನಲಾಗಿತ್ತು. ಈ ಹಿನ್ನೆಲೆ ಭಜರಂಗ ದಳ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳು ಇಂದು ಶ್ರೀರಂಗಪಟ್ಟಣ ಬಂದ್ ಗೆ ಕರೆ ನೀಡಿದೆ. ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಇಂದು ಶ್ರೀರಂಗಪಟ್ಟಣದ ಮುಖ್ಯ ರಸ್ತೆಯಲ್ಲಿ 10 ಗಂಟೆಗೆ ಜಾಥಾ ನಡೆಸಿ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಲಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ