Breaking News
Home / ಜಿಲ್ಲೆ / ದಕ್ಷಿಣ ಕನ್ನಡ / ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸ್ನೇಹಿತೆಯರಿಬ್ಬರು ಸಾವನ್ನಪ್ಪಿದಾರೆ

ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸ್ನೇಹಿತೆಯರಿಬ್ಬರು ಸಾವನ್ನಪ್ಪಿದಾರೆ

Spread the love

ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ ಸ್ನೇಹಿತೆಯರು – ಧರ್ಮಸ್ಥಳ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು.

ಬೆಳ್ತಂಗಡಿ(ದಕ್ಷಿಣ ಕನ್ನಡ): ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸ್ನೇಹಿತೆಯರಿಬ್ಬರು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ(ಏ.6) ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆಯಲ್ಲಿ ನಡೆದಿದೆ.

ಮೃತ ಯುವತಿಯರು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಬಾಬು ಹಾಗೂ ಗೀತಾ ದಂಪತಿ ಪುತ್ರಿ ರಕ್ಷಿತಾ (22) ಹಾಗೂ ಆಕೆಯ ನೆರೆಮನೆಯ ಶ್ರೀನಿವಾಸ ಆಚಾರಿ ಹಾಗೂ ಪಾರ್ವತಿ ದಂಪತಿ ಪುತ್ರಿ ಲಾವಣ್ಯ (20) ಎಂದು ಗುರುತಿಸಲಾಗಿದೆ.

ಇವರಿಬ್ಬರು ಕಳೆದೊಂದು ವರ್ಷದಿಂದ ಅನಾರು ಹಾಗೂ ಮುಂಡೂರು ಪಳಿಕೆ – ಉಪ್ಪಾರ ಪಳಿಕೆ ವಲಯದ ಸೇವಾ ನಿರತೆಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಬ್ಬರು ಉತ್ತಮ ಸ್ನೇಹಿತೆಯಾಗಿದ್ದರು. ಕಳೆದ ಭಾನುವಾರ ರಕ್ಷಿತಾ ಹಾಗೂ ಲಾವಣ್ಯ ಇಬ್ಬರಿಗೂ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರೂ ಗುರುವಾರ(ಏ.6) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹೊಟ್ಟೆ ನೋವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈದ್ಯಕೀಯ ಪರೀಕ್ಷೆಯ ವರದಿ ನಂತರವೇ ಕಾರಣ ತಿಳಿದು ಬರಬೇಕಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೆಳತಿಯರಿಬ್ಬರು ಒಂದೇ ದಿನ ಹೊಟ್ಟೆ ನೋವಿನಿಂದ ಸಾವಿನಪ್ಪಿರುವುದು ಸಾರ್ವಜನಿಕರಲ್ಲಿ ಸಂಶಯಕ್ಕೆ ಕಾರಣವಾಗಿದೆ.

ಇಬ್ಬರು ಭಕ್ತರ ಸಾವು: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿಂದು ನಡೆಯುತ್ತಿದ್ದ ಗೋಲ್ಲಾಳೇಶ್ವರ ರಥೋತ್ಸವದಲ್ಲಿ ನಡೆದ ಅವಘಡದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತನನ್ನು ಸಾಹೇಬ ಪಟೇಲ(ಮುದುಕಣ್ಣ) ಖಾಜಾಪಟೇಲ ಕಾಚಾಪೂರ(55) ಎಂದು ಗುರುತಿಸಲಾಗಿದೆ. ಇವರು ತಮ್ಮ 18ನೇ ವಯಸ್ಸಿನಿಂದಲೂ ತೇರಿಗೆ ಕಳಶ ಮತ್ತು ಕೊಡೆ ಕಟ್ಟುತ್ತಿದ್ದರು. ಆದರೆ ಈ ಘಟನೆಯಲ್ಲಿ ಕೈಯಲ್ಲಿದ್ದ ಹಗ್ಗ ಕೊಸರಿದ ಕಾರಣ ರಥದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಜನರ ಮೇಲೆ ಅವರು ಬಿದ್ದರು. ಇದೇ ಸಂದರ್ಭದಲ್ಲಿ ಓರ್ವ ವ್ಯಕ್ತಿಯ ಕಾಲು ಮುರಿದಿದೆ ಎಂದು ತಿಳಿದು ಬಂದಿದೆ.

:


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ