Breaking News

ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳ ಬಿಜೆಪಿ ಮುಂದಾಗಿದೆ; ಸಿದ್ದರಾಮಯ್ಯ

Spread the love

ಬೆಂಗಳೂರು: ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ.

ಕನ್ನಡಿಗರೇ ಎಚ್ಚರ ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಇದೆಲ್ಲ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ನಡೆಯುತ್ತಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಆರೋಪಿಸಿದ್ದಾರೆ.

ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಸರ್ಕಾರ ಕೆಂಪು ಕಂಬಳಿ ಹಾಸಿ ಸ್ವಾಗತಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್​ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ ಎಂದು ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿದ್ದೆವು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಏನು ಕಾರಣ? ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ. ಇದು ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ