ನವದೆಹಲಿ : ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ನಾಳೆ ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸ ಬಳಿಕ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯ ಬಳಿಕ ನಾಳೆಯೇ 140 ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ರಾಜ್ಯ ಪ್ರವಾಸ ಕೈಗೊಂಡಿದ್ದು, ಮೋದಿ ರಾಜ್ಯಪ್ರವಾಸದ ಬಳಿಕ ಭಾನುವಾರ ರಾತ್ರಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿ ಸೋಮವಾರ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.