Breaking News

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಏ‌.11 ರವರೆಗೆ ಅವಕಾಶ

Spread the love

ಬೆಳಗಾವಿ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಏ‌.11 ರವರೆಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಏ.20 ಕಡೆಯ ದಿನವಾಗಿರುತ್ತದೆ.
ಸಾರ್ವಜನಿಕರು ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್(ಎನ್.ವಿ.ಎಸ್.ಪಿ) ಲಾಗಿನ್ ಆಗುವ ಮೂಲಕ ತಮ್ಮ ಹೆಸರು ನೋಂದಾಯಿಸಲು ಅಥವಾ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬಹುದು.

ಇದಲ್ಲದೇ ಅರ್ಹ ಮತದಾರರು ವೋಟರ್ ಹೆಲ್ಪ್ ಲೈನ್ ಆ್ಯಪ್ ಮೂಲಕವೂ ನಮೂನೆ-6 ಭರ್ತಿ ಮಾಡುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಹೆಸರು ಖಚಿತಪಡಿಸಿಕೊಳ್ಳಲು ಸಲಹೆ:
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಈಗಲೇ ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಹೆಸರು ಇಲ್ಲದಿದ್ದರೆ ಏ.11 ರವರೆಗೆ ಹೆಸರು ಸೇರ್ಪಡೆಗೆ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಈ ಅವಕಾಶವನ್ನು ಬಳಕೆ‌ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.


Spread the love

About Laxminews 24x7

Check Also

ಗ್ರಾಹಕ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಗೋಕಾಕ್ ಜಾತ್ರೆ ಬಂದೋಬಸ್ತ್​​ಗೆ ಬಂದಿದ್ದ ಹುಬ್ಬಳ್ಳಿ ಎಎಸ್ಐ ಹೃದಯಾಘಾತದಿಂದ ನಿಧನ

Spread the loveಬೆಂಗಳೂರು/ ಗ್ರಾಹಕ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಗೋಕಾಕ್ ಜಾತ್ರೆ ಬಂದೋಬಸ್ತ್​​ಗೆ ಬಂದಿದ್ದ ಹುಬ್ಬಳ್ಳಿ ಎಎಸ್ಐ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ