ಬೆಳಗಾವಿ: 2023-24ನೇ ಸಾಲೀನ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.
ಚುನಾವಣಾಧಿಕಾರಿಗಳ ನಿರ್ದೇಶನದ ಮೇರೆಗೆ ಬಾಲಕಾರ್ಮಿಕ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಅನ್ವಯ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷದವರು 18 ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಕಾರ್ಯಕ್ಕೆ ಬಳಸಿಕೊಂಡಿದ್ದಲ್ಲಿ ಕಾಯ್ದೆಯ ಪ್ರಾವಧಾನಗಳಂತೆ ಸಕ್ಷಮ ಪ್ರಾಧಿಕಾರದಲ್ಲಿ ಮೊಕದ್ದಮೆಯನ್ನು ಹೂಡಿ ಶಿಕ್ಷೆಗೆ ಒಳಪಡಿಸಲಾಗುವುದು.
ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು, ಜಿಲ್ಲಾ ಬಾಲಕಾರ್ಮಿಕ ಯೋಜನೆ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.