ಮೊಬೈಲ್ ಹೆಚ್ಚು ನೋಡಲು ಬಿಡಲಿಲ್ಲ ಎಂದು ಮನ ನೊಂದ 15 ವರ್ಷದ ಬಾಲಕಿಯೊಬ್ಬಳು 7 ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಬೈನ್ ಮಲಾಡ್‌ನ ಉಪನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಆದರೆ ಬಾಲಕಿಯ ಕುಟುಂಬಸ್ಥರು ಬಾಲಕಿಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದರಿಂದ ಆಕೆ ಅಸಮಾಧಾನಗೊಂಡಿದ್ದಳು ಎಂದು ಪೊಲೀಸರು ಶಂಕಿಸಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Laxmi News 24×7