ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ ತಂದಿದೆ. ಪಕ್ಷ ಮತ್ತು ರಾಜ್ಯಕ್ಕೆ ಅವರು ದೊಡ್ಡ ಸೇವೆ ಸಲ್ಲಿಸಿದ್ದಾರೆ. ಅಂತಹವರಿಗೆ ಅನ್ಯಾಯವಾಗಬಾರದು ಎಂದು ನಗರದ ಮೂರು ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀಜಿ ಹೇಳಿದರು.
ಶೆಟ್ಟರ್ ಅವರಿಗೆ ಪಕ್ಷದ ವರಿಷ್ಠರು ಟಿಕೆಟ್ ನಿರಾಕರಿಸಿರುವ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಶೆಟ್ಟರ್ ಅವರ ಸೇವೆಯನ್ನು ಗಣನೆಗೆ ತೆಗೆದುಕೊಂಡು ಟಿಕೆಟ್ ನೀಡಲು ಪರಿಗಣಿಸಬೇಕು ಎಂದರು
Laxmi News 24×7