ಮಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಲು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಿರ್ಧರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ.
ಬಿಜೆಪಿ ಟಿಕೆಟ್ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ ಮಾಡಿದ್ದಾರೆ. ನಾಳೆ ಸಂಜೆ ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
Laxmi News 24×7