Breaking News

ಕೇಂದ್ರ ಕಾರಾಗೃಹ ಮೇಲೆ ಪೊಲೀಸ್ ಮಿಂಚಿನ ದಾಳಿ

Spread the love

ಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹ ( ಜೈಲು)ದ ಮೇಲೆ ಬುಧವಾರ ಬೆಳಗಿನ ಜಾವ ಕಲಬುರಗಿ ಮಹಾನಗರ ಪೊಲೀಸ್ ಉಪ ಆಯುಕ್ತರ ನೇತೃತ್ವದಲ್ಲಿ ಮಿಂಚಿನ ದಾಳಿ ನಡೆದಿದೆ.

ಪೊಲೀಸ್ ಆಯುಕ್ತ ಆರ್. ಚೇತನ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತ ಅಡ್ಡೂರು ಶ್ರೀ ನಿವಾಸಲು ನೇತೃತ್ವದಲ್ಲಿ ತಂಡಗಳ ದಾಳಿ ನಡೆಸಿ ವ್ಯಾಪಕ ಶೋಧ ನಡೆಸಲಾಗಿದೆ.

 

ಬೆಳಗಿನ ಜಾವ 5.30ರ ಸುಮಾರಿಗೆ 120 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಒಳಗೊಂಡ ತಂಡ ದಾಳಿ ನಡೆಸಿ ಎರಡು ಗಂಟೆಗಳ ಕಾಲ ವ್ಯಾಪಕ ಶೋಧ ನಡೆಸಿದೆ.

ಚುನಾವಣೆ ಹಿನ್ನೆಲೆಯಲ್ಲಿ ಜೈಲಿನಿಂದ ಕೈದಿಗಳು ಮೊಬೈಲ್ ಕರೆ ಮಾಡಿ ಬೆದರಿಕೆ ಹಾಕುತ್ತಿರುವ ಹಿನ್ನೆಲೆಯಲ್ಲಿ ಈ ದಾಳಿ ಮಹತ್ವ ಪಡೆದುಕೊಂಡಿದೆ.

ದಾಳಿಯಲ್ಲಿ ಕಾರಾಗೃಹ ಸಂಪೂರ್ಣ ಎಲ್ಲವನ್ನು ಶೋಧಿಸಲಾಗಿದೆಯಲ್ಲದೇ ಪ್ರತಿಯೊಬ್ಬ ಕೈದಿಯನ್ನು ಸೂಕ್ಷ್ಮವಾಗಿ ತಪಾಸಣೆ ಗೆ ಒಳಪಡಿಸಲಾಗಿದೆ. ಪ್ರಮುಖವಾಗಿ ಎಲ್ಲರಿಗೂ ಎಚ್ಚರಿಕೆ ನೀಡಲಾಗಿದೆ.

ದಾಳಿಯಲ್ಲಿ ಏನೇನು ಪತ್ತೆ ಯಾಗಿದೆ ಎಂಬುದನ್ನು ಬಹಿರಂಗ ಪಡಿಸಿಲ್ಲ ದಾಳಿ ನಂತರ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ ರಂಗನಾಥ್ ಕಾರಾಗೃಹಕ್ಕೆ ಆಗಮಿಸಿ ಮಾಹಿತಿ ನೀಡಿದರು.


Spread the love

About Laxminews 24x7

Check Also

ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ

Spread the loveಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ