Breaking News

ಬೆಳಗಾವಿ: ನೀತಿ ಸಂಹಿತೆ ಉಲ್ಲಂಘನೆ, ಕುಡಚಿ ಶಾಸಕ ರಾಜೀವ್ ಮೇಲೆ ಕೇಸ್‌

Spread the love

ಬೆಳಗಾವಿ: ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿದ ಆರೋಪದಡಿ ಕುಡಚಿ ಶಾಸಕ ಪಿ.ರಾಜೀವ್ ಅವರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

ರಾಯಬಾಗ ತಾಲ್ಲೂಕಿನ ಮುಗಳಖೋಡದ ಕರಿಸಿದ್ಧೇಶ್ವರ ದೇವಸ್ಥಾನದಲ್ಲಿ ಏ.10ರಂದು ಶಾಸಕ ಪಿ.

ನಡೆದ ಪ್ರಚಾರ ಸಭೆ ನಡೆಸಿದ್ದರು. ಆಗ ಮಕ್ಕಳನ್ನು ಉದ್ದೇಶಿಸಿ ಪ್ರಚಾರ ಮಾಡುವಂತೆ ತಿಳಿಸಿದ್ದರು. ಕೆಲವು ಬಾಲಕರು ಬಿಜೆಪಿ ಚಿಹ್ನೆ ಇರುವ ಟೀ-ಶಾರ್ಟ್‌, ಶಾಲು ಧರಿಸಿದ್ದರು. ಈ ಬಗ್ಗೆ ಚುನಾವಣಾಧಿಕಾರಿ ಶಾಸಕ ಹಾಗೂ ದೇವಸ್ಥಾನ ಸಮಿತಿಯವರ ವಿರುದ್ಧ ದೂರು ದಾಖಲಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಕಾಗವಾಡ ತಾಲ್ಲೂಕಿನ ಮಂಗಸೂಳಿಯಲ್ಲಿ ಏ. 10ರಂದು ನಡೆದ ಪ್ರಚಾರ ಸಭೆಯಲ್ಲಿ ಅಪ್ರಾಪ್ತರು ಭಾಗವಹಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ರಾಜು ಕಾಗೆ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕೂಡ ಕಾಂಗ್ರೆಸ್‌ ಶಾಲು ಹಾಕಿರುವುದು ಗಮನಕ್ಕೆ ಬಂದಿದೆ. ಹೀಗಾಗಿ, ಕಾರ್ಯಕ್ರಮ ಆಯೋಜಕರ ವಿರುದ್ಧ ಕಾಗವಾಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ