Breaking News

ನಾಮಪತ್ರ ಸಲ್ಲಿಕೆ: ಐವರಿಗಷ್ಟೇ ಕಚೇರಿಗೆ ಪ್ರವೇಶ

Spread the love

ಬೆಂಗಳೂರು: ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆ ಗುರುವಾರದಿಂದ ಆರಂಭವಾಗುತ್ತಿದ್ದು, ಅಭ್ಯರ್ಥಿಯೂ ಸೇರಿದಂತೆ ಐದು ಮಂದಿ ಮಾತ್ರ ಚುನಾವಣಾಧಿಕಾರಿ ಕಚೇರಿಯೊಳಕ್ಕೆ ಪ್ರವೇಶಿಸಲು ಅವಕಾಶವಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.

 

ಏಪ್ರಿಲ್‌ 20ರವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಅಂಬೇಡ್ಕರ್‌ ಜಯಂತಿ (ಏಪ್ರಿಲ್‌ 14) ಹಾಗೂ ಭಾನುವಾರದಂದು ನಾಮಪತ್ರ ಸಲ್ಲಿಸಲು ಅವಕಾಶವಿರುವುದಿಲ್ಲ. ಉಳಿದ ದಿನಗಳಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ನಾಮಪತ್ರ ಸಲ್ಲಿಸಲು ಬರುವವರಿಗೆ ಚುನಾವಣಾಧಿಕಾರಿ ಕಚೇರಿಯ 100 ಮೀಟರ್‌ವರೆಗೆ ಮೂರು ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಏ.21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.24ರಂದು ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ