Breaking News

ಬೊಮ್ಮಾಯಿ ಅವರು ಪ್ರಯಾಣಿಸುವ ಹೆಲಿಕಾಪ್ಟರ್ ಟೇಕಾಫ್ ಗೆ ಮುನ್ನ ಹೆಲಿ ಪ್ಯಾಡ್ ಬಳಿ ಬೆಂಕಿ

Spread the love

ಬೈಂದೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಯಾಣಿಸುವ ಹೆಲಿಕಾಪ್ಟರ್ ಟೇಕಾಫ್ ಗೆ ಮುನ್ನ ಹೆಲಿ ಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು.

ಸಮೀಪದ ಅರೆಶಿರೂರು ಹೆಲಿಪ್ಯಾಡ್ ನಲ್ಲಿ ಈ ಘಟನೆ ನಡೆದಿದೆ. ಹೆಲಿಕಾಪ್ಟರ್ ನಲ್ಲಿ ಸಿಎಂ ಕೊಲ್ಲೂರಿಗೆ ಹೊರಡುವ ವೇಳೆ ಈ ಘಟನೆ ಸಂಭವಿಸಿದೆ.

ಹೆಲಿ ಪ್ಯಾಡ್ ಬಳಿಯ ಒಣ ಹುಲ್ಲಿಗೆ ಬೆಂಕಿ ಹೊತ್ತಿಕೊಂಡು ಭುಗಿಲೆದ್ದು ಆವರಿಸಿಕೊಳ್ಳತೊಡಗಿತು. ಕೂಡಲೆ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದರು. ಇದರಿಂದ ಸಿಎಂ ಪ್ರಯಾಣ ಕೆಲ ನಿಮಿಷಗಳ ವಿಳಂಬಕ್ಕೆ ಕಾರಣವಾಯಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ