Breaking News

18 ಸಾವಿರ ನೋಟ್‌ಬುಕ್‌ ಬಳಸಿ ಅಂಬೇಡ್ಕರ್‌ ಭಾವಚಿತ್ರ ರಚನೆ

Spread the love

ಹಾರಾಷ್ಟ್ರ : ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ 18 ಸಾವಿರ ನೋಟ್‌ಬುಕ್‌ಗಳನ್ನು ಬಳಸಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್ ಅವರ ಭಾವಚಿತ್ರವನ್ನು ರಚಿಸಲಾಗಿದ್ದು, ಮಹಾರಾಷ್ಟ್ರದ ಲಾತೂರ್‌ನಲ್ಲಿ ಈ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ.

Mosaic ಕಲಾ ಶೈಲಿಯಲ್ಲಿ ತಯಾರಾದ ಈ ಭಾವಚಿತ್ರದ ಹಿಂದೆ 18 ಕಲಾವಿದರ ಕೈಚಳಕವಿದೆ.

Ambedkar Jayanti | 18 ಸಾವಿರ ನೋಟ್‌ಬುಕ್‌ ಬಳಸಿ ಅಂಬೇಡ್ಕರ್‌ ಭಾವಚಿತ್ರ ರಚನೆ

ಪ್ರತಿವರ್ಷ ಏ‍ಪ್ರಿಲ್‌ 14ರಂದು ಅಂಬೇಡ್ಕರ್‌ ಜಯಂತಿಯನ್ನು ಆಚರಿಸಲಾಗುತ್ತದೆ. ಭಾರತದ ಸಂವಿಧಾನ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ. ಬಿ. ಆರ್‌ ಅಂಬೇಡ್ಕರ್ ಅವರ ಗೌರವಾರ್ಥವಾಗಿ ಈ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ಭಾವಚಿತ್ರ ಪ್ರದರ್ಶನದ ಮುಂದಾಳತ್ವ ವಹಿಸಿದ್ದ ಲಾತೂರ್ ಬಿಜೆಪಿ ಲೋಕಸಭಾ ಸದಸ್ಯ ಸುಧಾಕರ ಶ್ರಂಗಾರೆ ಹೇಳಿದ್ದಾರೆ.

11 ಸಾವಿರ ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ 100*110 ಅಡಿ ಎತ್ತರದ ಭಾವಚಿತ್ರವನ್ನು ತಯಾರಿಸಲಾಗಿದೆ.
ಸಾಮಾಜಿಕ ಬದ್ಧತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರದರ್ಶನದ ನಂತರ ಈ ಪುಸ್ತಕಗಳನ್ನು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಹಂಚಲಾಗುತ್ತದೆ ಎಂದು ಸುಧಾಕರ ಶ್ರಂಗಾರೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ

Spread the loveನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ