Breaking News

ಮಾಜಿ ಸಚಿವ ಶಶಿಕಾಂತ ನಾಯಿಕ ಬಿಜೆಪಿಗೆ ರಾಜಿನಾಮೆ

Spread the love

ಬೆಳಗಾವಿ: ಮಾಜಿ ಸಚಿವ ಶಶಿಕಾಂತ ನಾಯಿಕ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಪಕ್ಷದಲ್ಲಿ ಸರಿಯಾದ ಸ್ಥಾನಮಾನ ಕೊಡದಿರುವ ಹಿನ್ನೆಲೆಯಲ್ಲಿ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಶಶಿಕಾಂತ ನಾಯಿಕ ಗುರುವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

ಪಕ್ಷ ಕಟ್ಟಲು ಸಹವಾಲು ವರ್ಷಗಳ ಕಾಲ ಶ್ರಮಿಸಿದ್ದೇನೆ. ಹಳ್ಳಿ ಹಳ್ಳಿಯಲ್ಲಿ ಸಂಘಟನೆ ಮಾಡಿದ್ದೇನೆ. ಆದರೆ ಪಕ್ಷ ನನ್ನನ್ನು ಗುರುತಿಸಲಿಲ್ಲ. ಅನೇಕ ಬಾರಿ ಟಿಕೆಟ್ ಕೇಳಿದರೂ ಕೊಡಲಿಲ್ಲ. ಯಾವುದೇ ರಾತಿಯಲ್ಲೂ ನನಗೆ ಸಿಗಬೇಕಾದ ಕನಿಷ್ಠ ಗೌರವ ಕೊಡುತ್ತಿಲ್ಲ. ಹಾಗಾಗಿ ಬೇಸತ್ತು ರಾಜಿನಾಮೆ ನೀಡುವುದಾಗಿ ಅವರು ತಿಳಿಸಿದರು.

ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಶಿಕಾಂತ ನಾಯಿಕ ಹಾಗೂ ಬೆಂಬಲಿಗರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ