Breaking News

ಬೆಳಗಾವಿಯ ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ..!?

Spread the love

ಬೆಳಗಾವಿ : ಬಿಜೆಪಿಯಲ್ಲಿ ಮತ್ತೊಂದು ವಿಕೆಟ್‌ ಪತನವಾಗುತ್ತಿದ್ದು, ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಟಿಕೆಟ್‌ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇದೀಗ ಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಭರ್ಜರಿ ರಣತಂತ್ರ ರೂಪಿಸಲು ಮುಂದಾಗಿದ್ದಾರೆ.

 

ವಿಧಾನ ಸಭೆ ಚುನಾವಣೆ ಹೊತ್ತಲ್ಲೇ ಸಾಲು ಸಾಲು ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ನಾಯಕರು ಗುಡ್‌ಬೈ ಹೇಳುತ್ತಿರುವುದರಿಂದ ಬಿಜೆಪಿ ಮೇಲೆ ಭಾರೀ ಹೊಡೆತ ಬೀಳಲಿದೆ. ಇದೀಗ ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಟೆಂಪಲ್‌ ರನ್‌ ಶುರು ಮಾಡಿದ್ದಾರೆ.

ಈ ಸಂಧರ್ಭದಲ್ಲಿ ಅಕ್ಕಪಕ್ಕದ ನಿವಾಸಿಗಳ ಮನೆಗಳಿಗೂ ತೆರಳಿ ಸ್ಪರ್ಧೆ ಮಾಡುವ ವಿಚಾರ ತಿಳಿಸಿದ್ದಾರೆ. ಬಿಜೆಪಿ ಬಂಡಾಯ ಎದ್ದ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ನುಂಗಲಾರದ ಬಿಸಿ ತುಪ್ಪದಂತಹ ಪರಿಸ್ಥಿತಿ ನಿರ್ಮಾಣವಾಗಿದಂತೂ ನಿಜ. ಮುಂದಿನ ದಿನಗಳಲ್ಲಿ ಯಾರೆಲ್ಲ ಬಿಜೆಪಿ ರಾಜೀನಾಮೆ ನೀಡುತ್ತಾರೆ ಅನ್ನೋದನ್ನು ಕಾದು ನೋಡಬೇಕಾಗಿದೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು.

Spread the love ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ