Breaking News

ಕರ್ನಾಟಕ ವಿಧಾನಸಭೆ ಚುನಾವಣೆ : 50 ಸಾವಿರ ರೂ. ಮೀರಿದ ಹಣ ಜೊತೆ ತೆಗೆದುಕೊಂಡು ಹೋಗುವಂತಿಲ್ಲ!

Spread the love

ಲಬುರಗಿ : ವಿಧಾನಸಭೆ‌ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೆ ದಾಖಲೆ, ವಿವರಣೆ ಇಲ್ಲದೆ ಯಾವುದೇ ವ್ಯಕ್ತಿ 50,000 ರೂ. ಕ್ಕಿಂತ ಹೆಚ್ಚಿನ ಹಣವನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ‌ವಿ. ಗುರುಕರ್ ಆದೇಶ ಹೊರಡಿಸಿದ್ದಾರೆ.

 

ಇನ್ನು ದಾಖಲೆ‌ ಇಲ್ಲದ 10,000 ರೂ. ಮೀರಿದ ಯಾವುದೇ ಸರಕುಗಳನ್ನು ಸಂಗ್ರಹಣೆ ಮತ್ತು ಬೃಹತ್ ಪ್ರಮಾಣದಲ್ಲಿ ಸಹ ಸಾಗಿಸುವಂತಿಲ್ಲ. ಈ ಆದೇಶ‌ ಚುನಾವಣೆ‌ ಮುಕ್ತಾಯದ ವರೆಗೆ ಜಿಲ್ಲೆಯಾದ್ಯಂತ ಜಾರಿಯಲ್ಲಿ ಇರಲಿದ್ದು, ಮುಕ್ತ, ನ್ಯಾಯಸಮ್ಮತ, ಪಾರದರ್ಶಕ ಮತ್ತು ಶಾಂತಿಯುತವಾಗಿ ಚುನಾವಣೆ ಜರುಗಲು ಜಿಲ್ಲೆಯ ಜನತೆ ಸಹಕರಿಸಬೇಕು‌ ಎಂದು‌ ಮನವಿ ಮಾಡಿದ್ದಾರೆ.

ಚುನಾವಣೆ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ‌ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿ ಲಂಚ ನೀಡಬಾರದು ಅಥವಾ ಹಣವನ್ನು ಲಂಚದ ರೂಪದಲ್ಲಿ ನೀಡಲು ಪ್ರಯತ್ನಿಸಬಾರದು. ಸರಕುಗಳು, ಬೆಲೆಬಾಳುವ ವಸ್ತುಗಳು, ಉಡುಗೊರೆ ಚೀಟಿಗಳು, ಸಿಮ್ ಕಾರ್ಡ್ ಬಾಕಿಗಳು, ಪ್ರಯಾಣ ಆಯೋಜನೆ, ಉಚಿತ ಆಹಾರ (ಬೇಯಿಸಿದ ಅಥವಾ ಬೇಯಿಸದ), ಮದ್ಯ ಅಥವಾ ಇತರೆ ಪಾನೀಯಗಳು, ಉಚಿತ ಇಂಧನ, ಸಬ್ಸಿಡಿ ಹೀಗೆ ಯಾವುದನ್ನು ನೀಡಬಾರದು ಮತ್ತು ಪಡೆಯಬಾರದು. ಮುಂದುವರೆದು, ಇದನ್ನು ಯಾವುದೇ ರೀತಿಯಲ್ಲಿ ಸಂಗ್ರಹಿಸಬಾರದು, ಸಾಗಿಸಬಾರದು ಹಾಗೂ ಅದಕ್ಕೆ ಪೂರಕವಾಗಿ ಸಹಾಯ ಮಾಡಬಾರದು ಎಂದು ತಿಳಿಸಿದ್ದಾರೆ.

ಇನ್ನು ವಸ್ತುಗಳನ್ನು ಮಾರಾಟ ಮಾಡುವ, ಸಂಗ್ರಹಿಸುವ, ಸ್ಟಾಕ್ ಮಾಡುವ ಅಥವಾ ಇತರೆ ರೀತಿಯ ವ್ಯವಹಾರಗಳನ್ನು ಮಾಡುವ ಪ್ರತಿಯೊಬ್ಬ ವ್ಯಕ್ತಿಯು ಮೇಲಿನ ನಿಷೇಧಿತ ವಸ್ತುಗಳ ಉದ್ದೇಶಕ್ಕಾಗಿ ಯಾವುದೇ ವಹಿವಾಟು ಶಂಕಿಸಿದರೆ, ಲಿಖಿತವಾಗಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಾರಾಟದ ಕುರಿತು ವರದಿ ನೀಡಬೇಕು.

ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಚಿಸಿರುವ ಸ್ಥಿರ ಕಣ್ಗಾವಲು ತಂಡಗಳು, ಚೆಕ್ ಪೋಸ್ಟ್‌ ತಂಡ, ವಿಡಿಯೋ ಕಣ್ಗಾವಲು ತಂಡ, ಫ್ಲೈಯಿಂಗ್ ಸ್ಕ್ವಾಡ್‌ಗಳು ಸಾಮಾನ್ಯ ಜನರಿಗೆ ಯಾವುದೇ ಅನಾನುಕೂಲತೆ, ಕಿರಿಕಿರಿ ಆಗದಂತೆ ಖಚಿತಪಡಿಸಿಕೊಳ್ಳಬೇಕು‌ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಆದೇಶದ ಉಲ್ಲಂಘನೆಯಿಂದ ಯಾರಿಗಾದರೂ ಅಡಚಣೆ, ಹಾನಿ, ಕಿರಿಕಿರಿ ಅಥವಾ ಗಾಯ ಇತ್ಯಾದಿಗಳನ್ನು ಉಂಟುಮಾಡಿದರೆ ಅಥವಾ ಮಾನವನ ಜೀವನ, ಆರೋಗ್ಯ ಅಥವಾ ಸುರಕ್ಷತೆ ಅಥವಾ ಗಲಭೆ ಅಥವಾ ಗಲಭೆಗೆ ಬೆದರಿಕೆಯನ್ನು ಉಂಟುಮಾಡುವ ಪ್ರವೃತ್ತಿಗಳನ್ನು ಸೆಕ್ಷನ್ 188 ಐ.ಪಿ.ಸಿ ಅಡಿಯಲ್ಲಿ ಪ್ರತ್ಯೇಕವಾಗಿ ಅಪರಾಧವನ್ನು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಸಿ. ಯಶವಂತ ವಿ. ಗುರುಕರ್ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ