Breaking News

ಹೃದಯಾಘಾತದಿಂದ ತಡರಾತ್ರಿ ಕಾಂಗ್ರೆಸ್ ನ ಮಾಜಿ ಶಾಸಕ `ವೆಂಕಟಸ್ವಾಮಿ’ ನಿಧನ|

Spread the love

ಬೆಂಗಳೂರು : ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ (53) ಅವರು ತೀವ್ರ ಹೃದಯಾಘಾತದಿಂದ ತಡರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧರನಾಗಿದ್ದಾರೆ.

ವೆಂಕಟಸ್ವಾಮಿಗೆ ಕಳೆದ 1 ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಎರಡು ಬಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರಗೊಂಡಿದ್ದ ಮಾಜಿ ಶಾಸಕ ವೆಂಕಟಸ್ವಾಮಿಗೆ ಕಳೆದ 2 ದಿನಗಳ ಹಿಂದೆಯೂ ಹೃದಯಾಘಾತವಾಗಿತ್ತು. ಆದರೆ ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಸಾದರಹಳ್ಳಿಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ